Luke 12:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.
Kannada BSI Bible 2016
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.
Kannada Bible (KNCL) BSI 2016
ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.