Luke 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
Kannada BSI Bible 2016
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನ ಮೇಲೆ ಏನಾದರೂ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು; ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
Kannada Bible (KNCL) BSI 2016
“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.