Luke 12:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.
Kannada BSI Bible 2016
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿಮ್ಮನ್ನು ಸಭಾಮಂದಿರಗಳ ಅಧ್ಯಕ್ಷರ ಮುಂದಕ್ಕೂ ಅಧಿಕಾರಿಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ಹಿಡುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರಕೊಡಬೇಕು? ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ.
Kannada Bible (KNCL) BSI 2016
“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,