Luke 12:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
Kannada BSI Bible 2016
ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಎಲಾ ಮನುಷ್ಯ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇವಿುಸಿದವರಾರು ಎಂದು ಅವನನ್ನು ಕೇಳಿ
Kannada Bible (KNCL) BSI 2016
ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.