Luke 12:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,
Kannada BSI Bible 2016
ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಣಜಗಳನ್ನು ಕೀಳಿಸಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ತುಂಬಿಟ್ಟು
Kannada Bible (KNCL) BSI 2016
‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.