Luke 12:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜೀವಾತ್ಮಕ್ಕೆ, ಜೀವವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಂದಿದೆ, ವಿಶ್ರಮಿಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು’ ಅಂದುಕೊಂಡನು.
Kannada BSI Bible 2016
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.
Kannada Bible (KNCL) BSI 2016
ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ\,’ ಎಂದುಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.