Luke 12:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.
Kannada BSI Bible 2016
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.
Kannada Bible (KNCL) BSI 2016
ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.