Luke 12:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.
Kannada BSI Bible 2016
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.