Luke 12:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
Kannada BSI Bible 2016
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
Kannada Bible (KNCL) BSI 2016
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ!