Luke 12:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಗಮನಿಸಿ ನೋಡಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವ ವೈಭವದಲ್ಲಿ ಇದ್ದಾಗಲೂ, ಈ ಅಡವಿಯ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪುಗಳನ್ನು ಧರಿಸಲಿಲ್ಲವೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೂವುಗಳು ಬೆಳೆಯುವ ರೀತಿಯನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; ಆದರೂ ಈ ಹೂವುಗಳೊಳಗೆ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.