Luke 12:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
Kannada BSI Bible 2016
ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.
Kannada Bible (KNCL) BSI 2016
ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?