Luke 12:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
Kannada BSI Bible 2016
ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು; ಮತ್ತು ನೀವು ಕೋಣೆಗಳೊಳಗೆ ಕಿವಿಮಾತು ಆಡಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು.
Kannada Bible (KNCL) BSI 2016
ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.