Luke 12:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
Kannada BSI Bible 2016
ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
Kannada Bible (KNCL) BSI 2016
ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.