Luke 12:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Kannada BSI Bible 2016
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
Kannada Bible (KNCL) BSI 2016
“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.