Luke 12:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
Kannada BSI Bible 2016
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗಿರುವದನ್ನು ಮಾರಿಬಿಟ್ಟು ದಾನಾ ಕೊಡಿರಿ; ಹಳೇವಾಗದಂಥ ಹಮ್ಮೀಣಿಗಳನ್ನು ಮಾಡಿಕೊಂಡು ಪರಲೋಕದಲ್ಲಿ ಲಯವಾಗದ ದ್ರವ್ಯವನ್ನು ಇಟ್ಟುಕೊಳ್ಳಿರಿ. ಅಲ್ಲಿ ಕಳ್ಳನು ಸಮೀಪಕ್ಕೆ ಬರುವದಿಲ್ಲ; ಅದು ನುಸಿಹಿಡಿದು ನಾಶವಾಗುವದಿಲ್ಲ.
Kannada Bible (KNCL) BSI 2016
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.