Luke 12:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
Kannada BSI Bible 2016
ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಂತೂ ತಮ್ಮ ಯಜಮಾನನು ಬಂದು ತಟ್ಟಿದ ಕೂಡಲೆ ಕದವನ್ನು ತೆರೆಯುವದಕ್ಕೆ ಸಿದ್ಧವಾಗಿದ್ದು ಮದುವೇ ಊಟವನ್ನು ಯಾವಾಗ ತೀರಿಸಿಕೊಂಡು ಬರುವನೋ ಎಂದು ಅವನನ್ನು ಎದುರುನೋಡುತ್ತಿರುವ ಮನುಷ್ಯರಂತಿರಿ.
Kannada Bible (KNCL) BSI 2016
ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ.