Luke 12:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.