Luke 12:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
Kannada BSI Bible 2016
ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯ ಜಾವದಲ್ಲಿಯಾಗಲಿ ಮೂರನೆಯ ಜಾವದಲ್ಲಿಯಾಗಲಿ ಬಂದಾತನಿಗೆ ಹಾಗೆ ಕಾಣಿಸಿಕೊಂಡವರು ಧನ್ಯರು.
Kannada Bible (KNCL) BSI 2016
“ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.