Luke 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
Kannada BSI Bible 2016
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ - ದೇಹವನ್ನು ಕೊಂದು ಅದಕ್ಕಿಂತ ಹೆಚ್ಚಿನದೇನೂ ಮಾಡಲಾರದವರಿಗೆ ಹೆದರಬೇಡಿರಿ.
Kannada Bible (KNCL) BSI 2016
“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.