Luke 12:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
Kannada BSI Bible 2016
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?
Kannada Bible (KNCL) BSI 2016
ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?