Luke 12:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,
Kannada BSI Bible 2016
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಆಳು - ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವದಕ್ಕೂ ತಿಂದು ಕುಡಿದು ಅಮಲೇರುವದಕ್ಕೂ ತೊಡಗಿದರೆ
Kannada Bible (KNCL) BSI 2016
“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,