Luke 12:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.
Kannada BSI Bible 2016
ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿನವಾಗಿ ಹೊಡಿಸಿ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು.
Kannada Bible (KNCL) BSI 2016
ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.