Luke 12:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.
Kannada BSI Bible 2016
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.
Kannada Bible (KNCL) BSI 2016
“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.