Luke 12:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
Kannada BSI Bible 2016
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
Kannada BSI JV (ಕನ್ನಡ ಸತ್ಯವೇದವು J.V. (BSI))
ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.
Kannada Bible (KNCL) BSI 2016
ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”