Luke 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.
Kannada BSI Bible 2016
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯಾರಿಗೆ ಹೆದರಬೇಕೋ ನಿಮಗೆ ತಿಳಿಸುತ್ತೇನೆ; ಕೊಂದ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು; ಹೌದು, ಆತನಿಗೇ ಹೆದರಬೇಕೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.