Luke 12:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೇಸು ಜನಸಮೂಹಕ್ಕೆ ಹೇಳಿದ್ದೇನಂದರೆ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ, ಹಾಗೆಯೇ ಆಗುತ್ತದೆ.
Kannada BSI Bible 2016
ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಜನರೆಲ್ಲರಿಗೂ ಹೇಳಿದ್ದೇನಂದರೆ - ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೇ ಆಗುತ್ತದೆ.
Kannada Bible (KNCL) BSI 2016
ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: “ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು.