Luke 12:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
Kannada BSI Bible 2016
ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ?
Kannada Bible (KNCL) BSI 2016
ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?