Luke 12:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.
Kannada BSI Bible 2016
ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು.
Kannada Bible (KNCL) BSI 2016
ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.