Luke 12:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಅಂದನು.
Kannada BSI Bible 2016
ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.