Luke 12:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
Kannada BSI Bible 2016
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
Kannada Bible (KNCL) BSI 2016
“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.