Luke 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
Kannada BSI Bible 2016
ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಸಮಯದಲ್ಲಿ ಕೆಲವರು ಆತನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
Kannada Bible (KNCL) BSI 2016
ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.