Luke 13:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
Kannada BSI Bible 2016
ಆಗ ಇಗೋ, ಹದಿನೆಂಟು ವರುಷ ಗಳಿಂದಲೂ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬೊಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು; ಅವಳು ಯಾವ ರೀತಿಯಲ್ಲಿಯೂ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು.
Kannada Bible (KNCL) BSI 2016
ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.