Luke 13:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
Kannada BSI Bible 2016
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.
Kannada Bible (KNCL) BSI 2016
ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.