Luke 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
Kannada BSI Bible 2016
ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.
Kannada Bible (KNCL) BSI 2016
ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?