Luke 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
Kannada BSI Bible 2016
ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.