Luke 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
Kannada BSI Bible 2016
ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.
Kannada Bible (KNCL) BSI 2016
ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.