Luke 13:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.