Luke 13:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
Kannada BSI Bible 2016
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು - ನೀವು ಎಲ್ಲಿಯವರೋ ನಿಮ್ಮ ಗುರುತು ನನಗಿಲ್ಲ; ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟುಹೋಗಿರಿ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
Kannada Bible (KNCL) BSI 2016
ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.