Luke 13:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
Kannada BSI Bible 2016
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
Kannada Bible (KNCL) BSI 2016
ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.