Luke 13:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು, “ಇಲ್ಲಿಂದ ಹೋಗಿ ಅಡಗಿಕೊ! ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
Kannada BSI Bible 2016
ಅದೇ ದಿನದಲ್ಲಿ ಫರಿಸಾಯರಲ್ಲಿ ಕೆಲವರು ಆತನ ಬಳಿಗೆ ಬಂದು--ನೀನು ಇಲ್ಲಿಂದ ಹೊರಟುಹೋಗು; ಯಾಕಂದರೆ ಹೆರೋದನು ನಿನ್ನನ್ನು ಕೊಲ್ಲುವನು ಎಂದು ಆತನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಆತನಿಗೆ - ನೀನು ಇಲ್ಲಿಂದ ಹೊರಟುಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು
Kannada Bible (KNCL) BSI 2016
ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.