Luke 13:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
Kannada BSI Bible 2016
ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನೀವು ಹೋಗಿ - ಇಗೋ ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಗಳನ್ನು ವಾಸಿಮಾಡುತ್ತಾ ಇದ್ದು ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ ಎಂದು ಆ ನರಿಗೆ ಹೇಳಿರಿ.
Kannada Bible (KNCL) BSI 2016
ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.