Luke 13:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
Kannada BSI Bible 2016
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.
Kannada Bible (KNCL) BSI 2016
“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.