Luke 13:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಆಲಯವು ಬರಿದಾಗುವುದು. ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದ!’ ಎಂದು ಹೇಳುವ ಸಮಯದ ತನಕ ನೀನು ನನ್ನನ್ನು ನೋಡುವುದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ನಿಮ್ಮ ಆಲಯವು ನಿಮಗೆ ಬರೀದಾಗಿಬಿಟ್ಟದೆ. ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ ಎಂದು ನೀವು ಹೇಳುವ ತನಕ ನೀವು ನನ್ನನ್ನು ನೋಡುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.