Luke 13:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
Kannada BSI Bible 2016
ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?
Kannada Bible (KNCL) BSI 2016
ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?