Luke 13:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
Kannada BSI Bible 2016
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬಾನೊಬ್ಬನು ತನ್ನ ದ್ರಾಕ್ಷೆಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದ್ದನು. ತರುವಾಯ ಅವನು ಅದರಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು, ಸಿಕ್ಕಲಿಲ್ಲ.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.