Luke 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
Kannada BSI Bible 2016
ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು.
Kannada Bible (KNCL) BSI 2016
ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.