Luke 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
Kannada BSI Bible 2016
ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕೂತುಕೋ; ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ - ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ ಅನ್ನುವನು. ಆಗ ನಿನ್ನ ಸಂಗಡ ಕೂತಿರುವವರೆಲ್ಲರ ಮುಂದೆ ನಿನಗೆ ಮಾನ ಬರುವದು.
Kannada Bible (KNCL) BSI 2016
ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, ‘ಗೆಳೆಯಾ, ಮೇಲೆ ಬಾ’ ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.