Luke 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Kannada BSI Bible 2016
ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
Kannada Bible (KNCL) BSI 2016
ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.