Luke 14:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.
Kannada BSI Bible 2016
ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.
Kannada Bible (KNCL) BSI 2016
ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.