Luke 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
Kannada BSI Bible 2016
ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು
Kannada Bible (KNCL) BSI 2016
ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.